ಬೆಂಗಳೂರು : ಪಡಿತರ ಚೀಟಿಯ ಫಲಾನುಭವಿಗಳು ಇ-ಕೆವೈಸಿಯನ್ನು ಅಪ್‍ಡೇಟ್ ಮಾಡಿಸಲು ಅನುಕೂಲವಾಗುವಂತೆ ಜತೆಗೆ ನ್ಯಾಯಬೆಲೆ ಅಂಗಡಿ ಮುಂದೆ ಸರತಿ ಸಾಲ್ಲಿನಲ್ಲಿ ನಿಲ್ಲುವುದನ್ನು ತಪ್ಪಿಸುವ ಸಲುವಾಗಿ ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ ‘ಅನ್ನ ಸೇವಾ’ ಮೊಬೈಲ್ ಆ್ಯಪ್‍ಗೆ ಆಹಾರ ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವ ರಿಝ್ವಾನ್ ಅರ್ಶದ್ ಪ್ರಾಯೋಗಿಕವಾಗಿ ಚಾಲನೆ ನೀಡಿದ್ದಾರೆ.

ಗುರುವಾರ ಇಲ್ಲಿನ ರಾಜೀವ್ ಗಾಂಧಿ ಕಾಲೋನಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಅನ್ನ ಸೇವಾ” ಮೊಬೈಲ್ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಪಡಿತರ ಫಲಾನುಭವಿಗಳು ಸರಳ, ಅನುಕೂಲಕರ ಹಾಗೂ ಸುಲಭವಾಗಿ ಇ-ಕೆವೈಸಿ ಪ್ರಕ್ರಿಯೆಯನ್ನು ತಾವೇ ಖುದ್ದಾಗಿ ಮೊಬೈಲ್ ಆ್ಯಪ್ ಮೂಲಕ ಡೌನ್‍ಲೋಡ್ ಮಾಡಿಕೊಂಡು ಅ.20ರವರೆಗೆ ಇ-ಕೆವೈಸಿ ಅಪ್‍ಡೇಟ್ ಮಾಡಲು ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಮೊದಲ ಹಂತದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮೀಣ, ಉಡುಪಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದ್ದು, ಇನ್ನುಳಿದ ಜಿಲ್ಲೆಗಳಿಗೆ 15ರಿಂದ20 ದಿನಗಳೊಳಗಾಗಿ ಜಾರಿ ಮಾಡಲಾಗುವುದು. ನಾಲ್ಕುವರೆ ಕೋಟಿ ಬಡಜನರ ಆಗುತ್ತಿರುವ ತೊಂದರೆ ಹಾಗೂ ಸಮಯದ ಮಹತ್ವವನ್ನು ಗಮನದಲ್ಲಿರಿಸಿಕೊಂಡು ಆ ಬಗ್ಗೆ ಚಿಂತನೆ ಮಾಡಿ ಈ ಆ್ಯಪ್ ಜಾರಿ ಮಾಡಿದೆ. ಪ್ರತಿಯೊಬ್ಬ ಫಲಾನುಭವಿಗಳು ಈ ಆ್ಯಪ್‍ನ ಉಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor