ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ
Update: 2026-02-22 17:05 IST
ಹೇಮಂತ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಬೆಂಗಳೂರಿನ ಸಂಜಯ ನಗರದ ಲೊಟ್ಟೆಗೊಲ್ಲಹಳ್ಳಿಯ ನಿವಾಸದಲ್ಲಿಯೇ ಹೇಮಂತ್ (22) ಆತ್ಮಹತ್ಯೆ ಮಾಡಿಕೊಂಡಿದ್ದು, ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸಂಜಯ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.