ಸಾಂದರ್ಭಿಕ ಚಿತ್ರ | Image by rawpixel.com on Magnific

ಬೆಂಗಳೂರು : 2026-27ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಹಾಗೂ ಎಲ್ಲ ವಿಧದ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಅರ್ಜಿಗಳನ್ನು ಆಹ್ವಾನಿಸಿದೆ.

ಶಾಲಾ ವಿದ್ಯಾರ್ಥಿಗಳನ್ನು ಸಂಬಂಧಪಟ್ಟ ಶಾಲಾ ಮುಖ್ಯ ಶಿಕ್ಷಕರು ಶಾಲಾ ಲಾಗಿನ್ ಮೂಲಕ ನೋಂದಾಯಿಸಬೇಕು. ಖಾಸಗಿ ಅಭ್ಯರ್ಥಿಗಳು, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಮತ್ತು ಶಾಲಾ ಪುನರಾವರ್ತಿತ ವಿದ್ಯಾರ್ಥಿಗಳು ನೇರವಾಗಿ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ತಮ್ಮ ವಿವರಗಳನ್ನು ಮಂಡಳಿಯ ಅಧಿಕೃತ ಜಾಲತಾಣವಾದ https://kseab.karnataka.gov.in  ಮೂಲಕ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor