ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ದೊರಕದಿರುವುದು ಮೂಲಭೂತ ಹಕ್ಕಿನ ಉಲ್ಲಂಘನೆ: ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ

Update: 2026-08-18 19:50 IST

ಸಾಂದರ್ಭಿಕ ಚಿತ್ರ | PC : Image by wahyu_t on Magnific


ಬೆಂಗಳೂರು : ಶಾಲೆ ಆರಂಭವಾಗಿ 3 ತಿಂಗಳು ಕಳೆದರೂ ಹೆಚ್ಚುವರಿಯಾಗಿ ದಾಖಲಾದ ಮಕ್ಕಳಿಗೆ ಪಠ್ಯ ಪುಸ್ತಕಗಳು ದೊರಕದಿರುವುದು ಮಕ್ಕಳ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ ತಿಳಿಸಿದೆ.

ಮಂಗಳವಾರ ಈ ಕುರಿತು ಪ್ರಕಟನೆ ನೀಡಿರುವ ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯದ ಪ್ರದಾನ ಸಂಚಾಲಕ ನಿರಂಜನಾರಾಧ್ಯ ವಿ.ಪಿ., ಶಾಲೆಗಳು ಪ್ರಾರಂಭವಾಗಿ 3 ತಿಂಗಳು ಕಳೆದಿದ್ದರೂ ರಾಜ್ಯದ ಹಲವು ಜಿಲ್ಲೆಗಳ ಸರಕಾರಿ ಶಾಲೆಗಳಲ್ಲಿ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ ದಾಖಲಾಗಿರುವ 8 ಮತ್ತು 9ನೇ ತರಗತಿಯ ಮಕ್ಕಳಿಗೆ ಪಠ್ಯ ಪುಸ್ತಕಗಳು ಸಿಗದಿರುವುದು ಬೇಸರದ ಸಂಗತಿ ಎಂದು ತಿಳಿದ್ದಾರೆ.

ಸರಕಾರಿ ಶಾಲೆಯಿಂದ ಬೇರೆ ಸರಕಾರಿ ಶಾಲೆಗೆ ವರ್ಗಾವಣೆಯಾಗಿ ಸೇರಿದ ಹೆಚ್ಚುವರಿ ಮಕ್ಕಳಿಗೆ ಹಿಂದಿನ ಶಾಲೆಯಿಂದ ಪಠ್ಯ ಪುಸ್ತಕಗಳು ದೊರೆಯುತ್ತವೆ. ಆದರೆ, ಖಾಸಗಿ ಶಾಲೆಗಳಿಂದ ಸರಕಾರಿ ಶಾಲೆಗಳಿಗೆ ಸೇರಿರುವ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಇಲಾಖೆ ಈವರೆಗೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಸರಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಾಕಿ ಇರುವ ಎಲ್ಲಾ ತರಗತಿಗಳ, ಎಲ್ಲ ವಿಷಯಗಳ ಪುಸ್ತಕಗಳನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಮಕ್ಕಳ ದಾಖಲಾತಿಯ ಬಗ್ಗೆ ಯಾವುದೇ ಸ್ಪಷ್ಟ ಯೋಜನೆ ಇಲ್ಲದೇ ಪುಸ್ತಕ ವಿತರಣೆಯಲ್ಲಿ ವಿಳಂಬ ಮಾಡುವ ಮೂಲಕ ಮಕ್ಕಳ ಕಲಿಕೆಗೆ ಅಡ್ಡಿಯಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News