ಬೀದರ್ | ಸಾಲಬಾಧೆ: ರೈತ ಆತ್ಮಹತ್ಯೆ
Update: 2025-10-26 13:45 IST
ಬೀದರ್: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ (ಬಿ) ತಾಲೂಕಿನ ಖಾನಾಪುರ್ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ರವೀಂದ್ರ ಕುಂಬಾರಗೆರೆ (30) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ತಮ್ಮ ಜಮೀನಿನಲ್ಲಿ ಸೋಯಾ ಮತ್ತು ತೊಗರಿ ಬೆಳೆ ಬೆಳೆದಿದ್ದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಬೆಳೆ ನಾಶವಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ.
ಕೃಷಿಗಾಗಿ ಬ್ಯಾಂಕ್ ಮತ್ತು ಖಾಸಗಿ ಸಾಲ ತೆಗೆದುಕೊಂಡಿದ್ದರು. ಅದನ್ನು ಹೇಗೆ ತೀರಿಸಬೇಕೆಂದು ಚಿಂತೆಯಲ್ಲಿ ಮನನೊಂದು ಶನಿವಾರ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸಂತಪೂರ ಪೊಲೀಸ್ ಠಾಣೆಯಲ್ಲಿ ಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.