ಔರಾದ್: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 960 ಕೆಜಿ ಪಡಿತರ ಅಕ್ಕಿ ವಶ
Update: 2025-09-15 15:15 IST
ಬೀದರ್: ಅಕ್ರಮವಾಗಿ ಸಂಗ್ರಹಿಸಿಟ್ಟ ಸುಮಾರು 25,920 ರೂ. ಮೌಲ್ಯದ 960 ಕೆ.ಜಿ. ಪಡಿತರ ಅಕ್ಕಿ ವಶಪಡಿಸಿಕೊಂಡ ಘಟನೆ ಔರಾದ್ (ಬಿ) ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟಣದ ಜನತಾ ಕಾlನಿಯಲ್ಲಿ ನಡೆದಿದೆ.
ಅಕ್ರಮವಾಗಿ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿರುವ ಮಾಹಿತಿಯಂತೆ, ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನಿರ್ದೇಶನ ಮತ್ತು ಮಾರ್ಗದರ್ಶನದಂತೆ ಔರಾದ್ ತಾlUಕಿನ ಆಹಾರ ಶಿರಸ್ತೇದಾರ ಪರಮೇಶ್ವರ್ ಜೊತೆಗೂಡಿ ಔರಾದ್ (ಬಿ) ಪೊಲೀಸ್ ಠಾಣೆಯ ಸಿ.ಎಚ್.ಸಿವಿಜಯಕುಮಾರ್ ಮತ್ತು ಸಿಪಿಸಿ ಹರೀಶ್ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಸುಮಾರು 25,920 ರೂ. ಮೌಲ್ಯದ 960 ಕೆ.ಜಿ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.