ಬೀದರ್ ಜಿಲ್ಲಾದ್ಯಂತ 52,812 ಪ್ರಕರಣ ಇತ್ಯರ್ಥ : ನ್ಯಾ.ಪ್ರಕಾಶ್ ಬನಸೋಡೆ
ಬೀದರ್ : ಜಿಲ್ಲೆಯಲ್ಲಿ ಮಾ.8 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಜಿಲ್ಲಾದ್ಯಂತ ಒಟ್ಟು 52,812 ಪ್ರಕರಣಗಳು ಇತ್ಯರ್ಥಗೊಳಿಸಲಾಗಿ. ಹಾಗೆಯೇ ಕಕ್ಷಿದಾರರಿಗೆ 28,03,91,766 ರೂ. ಪರಿಹಾರ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಬನಸೋಡೆ ಅವರು ತಿಳಿಸಿದ್ದಾರೆ.
ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾದ್ಯಂತ ಬಾಕಿ ಉಳಿದಿರುವ 10,044 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ. 12,83,46,917 ರೂ. ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. ಹಾಗೆಯೇ ಒಟ್ಟು 42,768 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಳಿಸಲಾಗಿದ್ದು, 15,20,44,849 ರೂ. ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಬಾರಿಯ ಲೋಕ ಆದಾಲತ್ ನಲ್ಲಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ ಸಂದಾನದ ಮೂಲಕ 7 ಜೋಡಿ ದಂಪತಿಯನ್ನು ರಾಜಿ ಸಂಧಾನದ ಮೂಲಕ ಒಂದು ಮಾಡಲಾಗಿದೆ. ಹಾಗೆಯೇ ನ್ಯಾಯಲಯಗಳಲ್ಲಿ ಬಾಕಿ ಇರುವ ಒಟ್ಟು 8 ಹಳೆಯ ಪ್ರಕರಣಗಳು ಇತ್ಯರ್ಥಪಡಿಸಲಾಗಿದೆ ಎಂದರು.
ಲೋಕ ಆದಲಾತ್‌ನಲ್ಲಿ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸಹಕರಿಸಿದ ಎಲ್ಲಾ ಇಲಾಖೆಯವರಿಗೂ, ಜಿಲ್ಲಾದ್ಯಂತ ಹೆಚ್ಚಿನ ಪ್ರಚಾರ ಕೈಗೊಂಡ ಪತ್ರಿಕಾ ಮಾದ್ಯಮದವರಿಗೆ ಪ್ರಾಧಿಕಾರದ ಮೂಲಕ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಗದೀಶ್ವರ್ ದೊರೆ, ಆಕಾಶ್ ಸಜ್ಜನಶೆಟ್ಟಿ, ನಾಗರಾಜ್, ಪ್ರೀತಿ, ಜೀವನ್ ಹಾಗೂ ಈರಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.