ಅರಣ್ಯ ಇಲಾಖೆಯಿಂದ ಹುಮನಾಬಾದ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ
ಬೀದರ್ : ಹುಮನಾಬಾದ್ ಪ್ರಾದೇಶಿಕ ಅರಣ್ಯ ವಲಯ ಮತ್ತು ಸಾಮಾಜಿಕ ಅರಣ್ಯ ವಲಯದ ವತಿಯಿಂದ ಅರಣ್ಯ ಇಲಾಖೆಯ ಆವರಣದಲ್ಲಿ ಇಂದು 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸುವ ಸಲುವಾಗಿ ವಲಯ ಕಚೇರಿ ಆವರಣದಲ್ಲಿ ಅರಳಿ ಗಿಡ ನೆಡುವ ಮೂಲಕ ವಿಶೇಷವಾಗಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ಪ್ರಾದೇಶಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಐಶ್ವರ್ಯ ಗೊಬ್ಬುರ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈ ದಿನವು ಕೇವಲ ಸಂಭ್ರಮದ ದಿನವಲ್ಲ. ಇದು ನಮ್ಮ ಹೊಣೆಗಾರಿಕೆಯನ್ನು ನೆನಪಿಸುವ ದಿನವೂ ಆಗಿದೆ. ಆದ್ದರಿಂದ ಅರಣ್ಯ, ಪರಿಸರವನ್ನು ಉಳಿಸಿ ಬೆಳೆಸುವ ಮೂಲಕ ದೇಶಕ್ಕೆ ಸೇವೆ ಸಲ್ಲಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಉಮಾ ನಾಯ್ಕ್, ಉಪ ವಲಯ ಅರಣ್ಯಧಿಕಾರಿಗಳಾದ ಅಂಬಾದಾಸ್, ರವೂಫಖಾನ್, ಹರಿದಾಸ್ ಹೆಗಡೆ ಹಾಗೂ ರಾಜಶೇಖರ್ ಧೂಪದ ಸೇರಿದಂತೆ ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ವಲಯದ ನೆಡುತೋಪು ಕಾವಲುಗಾರರು, ಕಛೇರಿ ಸಿಬ್ಬಂದಿಗಳು ಭಾಗವಹಿಸಿದರು.