×
Ad

ಸಮೀಕ್ಷ ಬೇಗ ಮುಗಿಸಿ ರೈತರಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗೆ ಮನವಿ

Update: 2025-09-29 20:25 IST

ಬೀದರ್: ಆದಷ್ಟು ಬೇಗ ಬೆಳೆ ಸಮೀಕ್ಷೆ ಮುಗಿಸಿ, ರೈತರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ರಾಜಶೇಖರ್ ಪಾಟೀಲ್ ಮತ್ತು‌ ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ನೇತ್ರತ್ವದ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸೋಮವಾರ ಮುಖ್ಯಮಂತ್ರಿಯವರ ಗೃಹದಲ್ಲಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಬೀದರ್ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಬೆಳೆ ಹಾನಿಯಾಗಿ ಜಿಲ್ಲೆಯ ರೈತರು ಬಹಳ ತೊಂದರೆಗೆ ಒಳಗಾಗಿದ್ದಾರೆ. ಆದ್ದರಿಂದ ಸಮೀಕ್ಷೆ ಬೇಗ ಮುಗಿಸಿ ಆದಷ್ಟು ಬೇಗ ರೈತರಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಲಾಯಿತು.

ಇವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಅಶ್ವಾಸನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಧರ್ಭದಲ್ಲಿ ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ್ ತಾಳಂಪಳ್ಳಿ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ. ಪುಂಡಲಿಕರಾವ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮನ್ನಾನ್ ಸೇಠ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿದ್ಯಾಸಾಗರ್ ಶಿಂದೆ, ಮಾಜಿ ಡಿಸಿಸಿ ಅದ್ಯಕ್ಷ ಬಸವರಾಜ್ ಬುಳ್ಳಾ, ಔರಾದ್ ತಾಲೂಕು ಮಾಜಿ ಕಾಂಗ್ರೆಸ್ ಅದ್ಯಕ್ಷ ಶಿವರಾಜ್ ದೇಶಮುಖ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೈಜಿನಾಥ್ ಯನಗುಂದೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News