×
Ad

ಜಾನುವಾರು ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸಂಸತ್‌ನಲ್ಲಿ ಧ್ವನಿ ಎತ್ತಲು ಸಂಸದ ಅಸದುದ್ದೀನ್ ಉವೈಸಿಗೆ ಮನವಿ

Update: 2025-07-17 19:36 IST

ಬೀದರ್ : ದೇಶದ ಹಲವು ರಾಜ್ಯಗಳಲ್ಲಿ ಜಾನುವಾರು ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸಂಸತ್‌ನಲ್ಲಿ ಧ್ವನಿ ಎತ್ತಲು ಖುರೇಶ್ ಕಾನ್ಫರೆನ್ಸ್ ಸಂಘಟನೆಯ ರಾಜ್ಯಾಧ್ಯಕ್ಷ ನಬಿ ಖುರೇಶಿ ಅವರು ಸಂಸದ ಅಸದುದ್ದೀನ್ ಉವೈಸಿ ಅವರಿಗೆ ಮನವಿ ಸಲ್ಲಿಸಿದರು.

ನಗರಕ್ಕೆ ಆಗಮಿಸಿದ ಸಂಸದ ಅಸದುದ್ದೀನ್ ಉವೈಸಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಹಲವು ರಾಜ್ಯಗಳಲ್ಲಿ ಜಾನುವಾರು ಸಾಗಣೆ ವೇಳೆ ಜಾನುವಾರು ವ್ಯಾಪಾರಿಗಳ ಮೇಲೆ ದೌರ್ಜನ್ಯ, ದೈಹಿಕ ಹಿಂಸೆ, ಗುಂಪು ಹಲ್ಲೆಯಂತಹ ಘಟನೆಗಳು ನಡೆಯುತ್ತಿವೆ. ಕೆಲ ಸಮಾಜ ವಿರೋಧಿ ಶಕ್ತಿಗಳು ರಸ್ತೆ ಹಾಗೂ ಹೆದ್ದಾರಿಗಳಲ್ಲಿ ವ್ಯಾಪಾರಿಗಳ ಜಾನುವಾರುಗಳನ್ನು ನಿರ್ಭಯವಾಗಿ ಲೂಟಿ ಮಾಡುತ್ತಿದ್ದಾರೆ. ಆದರೂ ಕೂಡ ಪೊಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ದೇಶದಲ್ಲಿ ಕಸಾಯಿ ಖಾನೆಗಳು, ಜಾನುವಾರು ಮಾರುಕಟ್ಟೆಗಳ ಆಧುನೀಕರಣವಾಗಬೇಕು. ಹಾಗೆಯೇ ಮಾಂಸ ವ್ಯಾಪಾರಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಸಂಸದ ಅಸದುದ್ದೀನ್ ಉವೈಸಿ ಅವರು ಜಾನುವಾರು ವ್ಯಾಪಾರಿಗಳ ಸಮಸ್ಯೆ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ನಬಿ ಖುರೇಶಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News