×
Ad

ಬಸವಕಲ್ಯಾಣದ ಆರೆಸ್ಸೆಸ್ ಪಥ ಸಂಚಲನದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಭಾಗಿ; ವಿಡಿಯೋ ವೈರಲ್

Update: 2025-10-19 19:26 IST

ಬೀದರ್ : ಬಸವಕಲ್ಯಾಣದಲ್ಲಿ ನಡೆದ ಆರೆಸ್ಸೆಸ್ ಪಥ ಸಂಚಲನದಲ್ಲಿ ಕಲಬುರಗಿ ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ್ ಅವರು ಗಣವೇಶ ಧರಿಸಿ ಭಾಗವಹಿಸಿದ ವಿಡಿಯೋ ವೈರಲ್ ಆಗಿದೆ.

ಇತ್ತೀಚಿಗೆ ಬಸವಕಲ್ಯಾಣ ನಗರದಲ್ಲಿ ಆರೆಸ್ಸೆಸ್ ನ 100ನೇ ವರ್ಷದ ಸಂಭ್ರಮಾಚರಣೆಯ‌ ಹಿನ್ನಲೆಯಲ್ಲಿ ಪಥಸಂಚಲನ ನಡೆಸಲಾಗಿತ್ತು. ಆ ಪಥ ಸಂಚಲನದಲ್ಲಿ ನೂರಾರು ಆರೆಸ್ಸೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಪಥ ಸಂಚಲನವು ನಗರದ ಪ್ರಮುಖ ರಸ್ತೆಗಳಲ್ಲಿ ನಡೆಸಲಾಗಿತ್ತು.

ಇಲ್ಲಿ ನಡೆದ ಪಥ ಸಂಚಲನದಲ್ಲಿ ಕಲಬುರಗಿ ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ್ ಅವರು ಭಾಗವಹಿಸಿದ ವಿಡಿಯೋ ವೈರಲ್ ಆಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News