×
Ad

Aurad | ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಿ : ಕಿರಣ್ ಪಾಟೀಲ್

ಹೊಕ್ರಾಣಾದಲ್ಲಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಜಾಗೃತಿ ಜಾಥಾ

Update: 2026-07-10 22:01 IST

ಔರಾದ್ : ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸುವುದು ಅತ್ಯಗತ್ಯ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಹೇಳಿದರು.

ತಾಲೂಕಿನ ಹೊಕ್ರಾಣಾ ಗ್ರಾಮದಲ್ಲಿ ಗುರುವಾರ ತಾಲೂಕು ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನದ ಅಂಗವಾಗಿ ನಡೆದ ಜಾಗೃತಿ ಜಾಥಾವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ, ಜಲಮೂಲಗಳು ಹಾಗೂ ಜೀವಜಾಲಕ್ಕೆ ಗಂಭೀರ ಹಾನಿಯಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಪರಿಸರ ಸ್ನೇಹಿ ಪರ್ಯಾಯ ವಸ್ತುಗಳ ಬಳಕೆಯನ್ನು ಉತ್ತೇಜಿಸುವುದೇ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಸ್ವಚ್ಛ ಹಾಗೂ ಪ್ಲಾಸ್ಟಿಕ್ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಾರ್ವಜನಿಕರು ಸಕ್ರಿಯವಾಗಿ ಕೈಜೋಡಿಸಿ, ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ಅವರು ಕರೆ ನೀಡಿದರು.

ಜಾಗೃತಿ ಜಾಥಾದ ವೇಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ, ಬೊಂತಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಮೇಶ್ ಹಾಗೂ ತಾಲೂಕು ಪಂಚಾಯತ್ ಐಇಸಿ ಸಂಯೋಜಕ ಅಂಬಾದಾಸ್ ಪಾಟೀಲ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News