×
Ad

ಔರಾದ್ | ಮಹಾರಾಜವಾಡಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ

Update: 2025-12-26 23:44 IST

ಔರಾದ್ : ಪೊಲೀಸ್ ಮತ್ತು ಸಾರ್ವಜನಿಕರ ನಡುವಿನ ನಂಬಿಕೆ ಬಲಪಡಿಸುವುದು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಸಂತಪುರ್ ಪೊಲೀಸ್ ಠಾಣೆ ಪಿಎಸ್‌ಐ ದಿನೇಶ್ ಅವರು ಹೇಳಿದರು.

ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಸಂತಪುರ್ ಪೊಲೀಸ್ ಇಲಾಖೆ ವತಿಯಿಂದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ಯಕ್ರಮದಡಿ ಪೊಲೀಸ್ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಕಾನೂನು ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳುತ್ತಿದ್ದಾರೆ ಎಂದರು.

ಈ ವೇಳೆ ಮಹಿಳೆಯರ ಸುರಕ್ಷತೆ, ಸೈಬರ್ ಅಪರಾಧಗಳ ಕುರಿತು ಎಚ್ಚರಿಕೆ, ಸಂಚಾರ ನಿಯಮಗಳ ಪಾಲನೆ, ಮಾದಕ ವಸ್ತು ವಿರೋಧಿ ಜಾಗೃತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅವರು ಮಾಹಿತಿ ನೀಡಿದ ಅವರು, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭಗವನರಾವ್ ಪಾಟೀಲ್, ಮಾಜಿ ತಾ.ಪಂ ಸದಸ್ಯ ದಿಗಂಬರ್ ಮಾಲೇಕರ್, ಸಂದೀಪ್ ಪಾಟೀಲ್, ನಾಗಗೊಂಡ, ಇಸ್ಮಾಯಿಲ್ ಸಾಬ್ ಹಾಗೂ ಮಕ್ಸುದ್ ಸೇರಿದಂತೆ ಇತರ ಗ್ರಾಮಸ್ಥರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News