ಶಾಮರಾವ್ ಮೇತ್ರೆ

ಔರಾದ್: ಸಾಲದ ಬಾಧೆಯಿಂದ ಮನನೊಂದು ರೈತನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೋರ್ಗಿ (ಜೆ) ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಶಾಮರಾವ್ ಮೇತ್ರೆ (54) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.

ಮೃತ ರೈತನ ಪತ್ನಿ ಗುಣವಂತಿ ನೀಡಿದ ದೂರಿನ ಪ್ರಕಾರ, ಈ ವರ್ಷ ಬರಗಾಲದಿಂದ ಬೆಳೆ ಹಾನಿಯಾಗಿದ್ದು, ಕೃಷಿಗಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಹಾಗೂ ಖಾಸಗಿ ಕಿರುಸಾಲ ಹಣಕಾಸು ಸಂಸ್ಥೆಗಳಿಂದ ಸುಮಾರು 4 ರಿಂದ 5 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಸಾಲ ತೀರಿಸಲು ಸಾಧ್ಯವಾಗದೆ ಮನನೊಂದು ಶಾಮರಾವ್ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಸಂತಪೂರ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಯಿಂದ ಮೃತದೇಹವನ್ನು ಹೊರತೆಗೆದರು.

ಈ ಸಂಬಂಧ ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor