×
Ad

ಔರಾದ್‌ | ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರುನಾಡು ಸಾಂಸ್ಕೃತಿಕ ಉತ್ಸವ

Update: 2025-10-27 18:49 IST

ಔರಾದ್ : ಉನ್ನತ ನಾಗರೀಕತೆ ನಿರ್ಮಾಣದಲ್ಲಿ ಮಾತೃಭಾಷೆ ಹಾಗೂ ಸಂಸ್ಕೃತಿ ತಳಹದಿಯಾಗಿವೆ ಎಂದು ತಹಶೀಲ್ದಾರ್ ಮಹೇಶ್ ಪಾಟೀಲ್ ಹೇಳಿದ್ದಾರೆ.

ಔರಾದ್ ಪಟ್ಟಣದ ಅಮರೇಶ್ವರ್ ಪದವಿ ಮಹಾವಿದ್ಯಾಲಯದಲ್ಲಿ ತಾಲೂಕು ಆಡಳಿತ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ “ಕರುನಾಡು ಸಾಂಸ್ಕೃತಿಕ ಉತ್ಸವ, ನಾಡು–ನುಡಿ–ಚಿಂತನೆ” ಕಾರ್ಯಕ್ರಮ ಹಾಗೂ ಉಪನ್ಯಾಸ ಮಾಲಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ವ್ಯಕ್ತಿತ್ವ ವಿಕಸನಕ್ಕೆ ಸಂಸ್ಕೃತಿ ಮತ್ತು ಸಾಹಿತ್ಯ ಅಗತ್ಯ. ಕನ್ನಡ ನಾಡು–ನುಡಿಗೆ ಉತ್ತರ ಕರ್ನಾಟಕದ ಕೊಡುಗೆ ಅಮೂಲ್ಯ. ವಚನ ಸಾಹಿತ್ಯ, ದಾಸ ಸಾಹಿತ್ಯ ಕನ್ನಡದ ಶ್ರೀಮಂತಿಕೆಗೆ ಮಹತ್ವದ ಕಾಣಿಕೆ ನೀಡಿದೆ. ಭಾಷಾಭಿಮಾನ ಕಳೆದುಕೊಂಡರೆ ನಾವು ದ್ವಿತೀಯ ದರ್ಜೆ ನಾಗರಿಕರಾಗುವ ಸ್ಥಿತಿ ಬರುತ್ತದೆ. ಆದ್ದರಿಂದ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆ ಇರಬೇಕು ಎಂದು ಅವರು ಹೇಳಿದರು.

ಕಸಾಪ ಅಧ್ಯಕ್ಷ ಬಿ.ಎಂ. ಅಮರವಾಡಿ ಅವರು ಕನ್ನಡ ಕೇವಲ ಭಾಷೆಯಲ್ಲ, ಅದು ಜೀವನ ಮೌಲ್ಯಗಳ ಸಂಗಮವಾಗಿದೆ. ಗಡಿಭಾಗದಲ್ಲಿ ಕನ್ನಡದ ಬೆಳವಣಿಗೆಗೆ ತಾಲೂಕು ಆಡಳಿತ ಕೈಗೊಂಡಿರುವ ಕಾರ್ಯಕ್ರಮ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಅಮರೇಶ್ವರ್ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಪ್ರೇಮಾ ಹೂಗಾರ್ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್.ಪಿ.ಮಠ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಅಮರಸ್ವಾಮಿ ಸ್ಥಾವರಮಠ್, ಕಸಾಪ ಸಂಚಾಲಕ ಅಶೋಕ್ ಶೆಂಬೆಳ್ಳೆ, ಉತ್ತಮ್ ಜಾಧವ್, ಶಿವರಾಮ್ ರಾಠೋಡ್, ಉತ್ತಮ್ ದಂಡೆ, ಸಿಕಂದರ್ ಚೌವ್ಹಾಣ್, ಶೇಖ್ ಮುಜೀಬ್ ಹಾಗೂ ಪ್ರಿಯಾ ಮಿಲಿಂದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News