×
Ad

ಔರಾದ್ | ನಾಗಮಾರಪಳ್ಳಿ ಗ್ರಾಮ ಆಡಳಿತ ಅಧಿಕಾರಿ ಅನ್ವರ್ ಜಕಾತಿಗೆ ರಾಜ್ಯಮಟ್ಟದ ಅತ್ಯುತ್ತಮ ಮತಗಟ್ಟೆ ಮೇಲ್ವಿಚಾರಕ ಪ್ರಶಸ್ತಿ

Update: 2026-01-25 22:43 IST

ಔರಾದ್: ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಅನ್ವರ್ ಜಕಾತಿ ಅವರಿಗೆ 2025–26ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಮತಗಟ್ಟೆ ಮೇಲ್ವಿಚಾರಕ ಪ್ರಶಸ್ತಿ ಲಭಿಸಿದೆ.

ಬೆಂಗಳೂರು ನಗರದ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್‌ನಲ್ಲಿ ರವಿವಾರ ಆಯೋಜಿಸಲಾದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ. ಅನ್ಬುಕುಮಾರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅನ್ವರ ಜಕಾತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News