×
Ad

Aurad | ಪಿಕಪ್-ಕಾರಿನ ನಡುವೆ ಢಿಕ್ಕಿ : ಯುವಕ ಮೃತ್ಯು

Update: 2026-07-01 21:36 IST

ಔರಾದ್ : ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಸೋರಳ್ಳಿ ಕ್ರಾಸ್ ಸಮೀಪ ಮಂಗಳವಾರ ಸಂಜೆ ನಡೆದಿದೆ.

ವಡಗಾಂವ್ (ದೇ) ಗ್ರಾಮದ ಮಹೇಶ್ (23) ಮೃತಪಟ್ಟ ಯುವಕ. ದರ್ಶನ್ ಜಮಾದಾರ್ (21) ಗಂಭೀರವಾಗಿ ಗಾಯಗೊಂಡಿದ್ದು, ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹೇಶ್ ಹಾಗೂ ದರ್ಶನ್ ಕಾರಿನಲ್ಲಿ ವಡಗಾಂವ್ (ದೇ) ಗ್ರಾಮದಿಂದ ಬೀದರ್ ಕಡೆಗೆ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನದೊಂದಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರು ರಸ್ತೆ ಬದಿಯ ಕಂದಕಕ್ಕೆ ಉರುಳಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಗಾಯಗೊಂಡ ದರ್ಶನ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News