ಔರಾದ್ | ನಾಗಮಾರಪಳ್ಳಿ ಪ್ರೌಢಶಾಲೆಗೆ ನಿರಂತರ ವಿದ್ಯುತ್ ಸಂಪರ್ಕಕ್ಕೆ ಮನವಿ
ಔರಾದ್: ತಾಲೂಕಿನ ನಾಗಮಾರಪಳ್ಳಿ ಪ್ರೌಢಶಾಲೆಗೆ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ಮಹೇಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ಚಿಂತಾಕಿ ಗ್ರಾಮದಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ ಗ್ರಾಮಸ್ಥರು, ಶಾಲೆಯಲ್ಲಿ ನಿರಂತರ ವಿದ್ಯುತ್ ಪೂರೈಕೆಯ ಕೊರತೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದೆ. ಆದ್ದರಿಂದ ಶಾಲೆಗೆ ಶಾಶ್ವತ ಹಾಗೂ ನಿರಂತರ ಜ್ಯೋತಿ ಸಂಪರ್ಕ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಧನರಾಜ್ ಕಾಂಬಳೆ, ಅನಿಲ್ ವರ್ಮಾ ಮತ್ತು ಸತೀಶ್ ಸಿಂಧೆ ಉಪಸ್ಥಿತರಿದ್ದರು.