ಕರ್ತವ್ಯ ಲೋಪ ಆರೋಪ; ಬಸವಕಲ್ಯಾಣ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಅಮಾನತು
ಬೀದರ್: ಕರ್ತವ್ಯಲೋಪ ಎಸಗಿದ ಹಿನ್ನೆಲೆ ಬಸವಕಲ್ಯಾಣ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಸಂತೋಷ್ ಚೌವ್ಹಾಣ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿನ ಕಾರ್ಯದರ್ಶಿ ಎ. ಶ್ರೀನಿಧಿ ಆದೇಶ ಹೊರಡಿಸಿದ್ದಾರೆ.
ತಾಲೂಕು ಪಂಚಾಯತ್ ನಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತಿದ್ದ ಸಂತೋಷ ಚವ್ಹಾಣ್ ಅವರು ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಅನುಷ್ಠಾನದಲ್ಲಿ ಕರ್ತವ್ಯಲೋಪ ಎಸಗಿದ್ದಾರೆ ಎನ್ನಲಾಗಿದೆ. ಸಂತೋಷ್ ಅವರು ಅಳತೆ ಪುಸ್ತಕಗಳನ್ನು ಸರಿಯಾಗಿ ನಿರ್ವಹಿಸಿಲ್ಲ. ಕಾಮಗಾರಿ ಅನುಷ್ಠಾನ ಮಾಡುವ ಒಂದು ವರ್ಷದ ಮುಂಚೆಯೇ ಬಿಲ್ ಪಾವತಿ ಮಾಡಿದ್ದಾರೆ. ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಿಲ್ಲ ಎಂಬ ಕಾರಣ ನೀಡಿ ಇವರನ್ನು ಅಮಾನತ್ತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವಾರ್ತಾ ಭಾರತಿಯ ವಾಟ್ಸ್ ಆ್ಯಪ್ ಚಾನಲ್ ಗೆ ಸೇರಲು ಕ್ಲಿಕ್ ಮಾಡಿ ►https://whatsapp.com/channel/0029VaA8ju86LwHn9OQpEq28