ಬಸವಕಲ್ಯಾಣ: ನಗರದ ಸಭಾಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಕಾರ್ಯಕ್ರಮಕ್ಕೆ ಮಾಜಿ ಶಾಸಕರು, ಮಾಜಿ ಸಚಿವರು, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ವಿವಿಧ ಪಕ್ಷಗಳ ಅಧ್ಯಕ್ಷರಿಗೆ ಆಹ್ವಾನ ಪತ್ರಿಕೆ ನೀಡದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇದು ಸರ್ಕಾರಿ ಕಾರ್ಯಕ್ರಮವೋ ಅಥವಾ ಬಿಜೆಪಿ ಕಾರ್ಯಕ್ರಮವೋ ಎಂದು ಖಾರವಾಗಿ ಪ್ರಶ್ನಿಸಿದರು.

ರಾಜ್ಯದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಅಟ್ಟೂರ್ ಬಸವರಾಜ್ ಅವರಿಗೂ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿಲ್ಲ. ಇಂತಹ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸುವುದು ಸರಿಯಲ್ಲ ಎಂದು ಬಿಇಒ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಗುರುಭವನ ಕಟ್ಟಡ ನಿರ್ಮಾಣಕ್ಕೆ ಹಲವು ವರ್ಷಗಳ ಹಿಂದೆಯೇ ತಮ್ಮ ಸಾನಿಧ್ಯದಲ್ಲಿ ಗುದ್ದಲಿಪೂಜೆ ನೆರವೇರಿಸಲಾಗಿತ್ತು. ಆದರೆ, ಇದುವರೆಗೆ ಕಾಮಗಾರಿ ಆರಂಭವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಶಾಸಕರು ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor