×
Ad

ಜಗತ್ತಿನಲ್ಲಿಯೇ ಮೊಟ್ಟ ಮೊದಲು ಸಾಮಾಜಿಕ ಕ್ರಾಂತಿ ಹುಟ್ಟು ಹಾಕಿದವರು ಬಸವಣ್ಣನವರು : ಸಚಿವ ಈಶ್ವರ್ ಖಂಡ್ರೆ

Update: 2025-04-30 20:13 IST

ಬೀದರ್ : ಜಗತ್ತಿನಲ್ಲಿಯೇ ಮೊದಲ ಬಾರಿಗೆ ಸಾಮಾಜಿಕ ಕ್ರಾಂತಿ ಹುಟ್ಟು ಹಾಕಿದವರು ವಿಶ್ವಗುರು ಬಸವಣ್ಣನವರಾಗಿದ್ದಾರೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ.ಖಂಡ್ರೆ ಅವರು ಹೇಳಿದರು.

ಇಂದು ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಅಂಗವಾಗಿ ನಗರದ ಬಸವೇಶ್ವರ್ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ನಾವು ಬಸವಣ್ಣನವರ ಪುಣ್ಯಭೂಮಿ ಕಲ್ಯಾಣ ನೆಲದಲ್ಲಿ ನೆಲೆಸಿದ್ದೇವೆ. 12ನೇ ಶತಮಾನದಲ್ಲಿ ಕಲ್ಯಾಣದಲ್ಲಿ ನಡೆದ ವಚನ ಕ್ರಾಂತಿಯು ಸಮಾಜದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಆಗುವಂತೆ ಮಾಡಿತು. ಬಸವಣ್ಣನವರ ವಚನ ಸಾಹಿತ್ಯದ ಮೂಲಕ ಜಾತಿರಹಿತ ಸಮಾಜ, ಸಮ ಸಮಾಜ ಮತ್ತು ಮೇಲು ಕೀಳು ಎಂಬ ಭಾವನೆಗಳು ಹೋಗಲಾಡಿಸಲು ಅವರ ಪ್ರಯತ್ನ ಮಹತ್ವದಾಗಿದೆ ಎಂದರು.

ಈ ಸಮಾರಂಭಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್, ಮಾಜಿ ಸಚಿವ ಬಂಡೆಪ್ಪ ಖಾಶಂಪೂರ್, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ್ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡ್, ಜೈರಾಜ್ ಖಂಡ್ರೆ, ಆನಂದ್ ದೇವಪ್ಪ, ಬಾಬು ವಾಲಿ, ಪಂಡಿತ್ ಚಿದ್ರಿ, ಈಶ್ವರಸಿಂಗ್ ಠಾಕೂರ್, ಸಂಜುಕುಮಾರ್ ಪಾಟೀಲ್, ಮಾರುತಿ ಬೌದ್ಧೆ ಹಾಗೂ ವಿಜಯಕುಮಾರ್ ಸೊನಾರೆ ಸೇರಿದಂತೆ ಬಸವ ಅಭಿಮಾನಿಗಳು ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News