Bhalki | ಆ.24 ರಂದು ಡಾ.ಬಸವಲಿಂಗ ಪಟ್ಟದೇವರು ಸಾಹಿತ್ಯ ಪ್ರಶಸ್ತಿ ಪ್ರದಾನ

Update: 2026-08-22 19:44 IST

ಭಾಲ್ಕಿ: ನಗರದ ಚನ್ನಬಸವಾಶ್ರಮ ಆವರಣದಲ್ಲಿ ಆ.24ರಂದು ಸಂಜೆ 6 ಗಂಟೆಗೆ ಶಿವಯ್ಯ ಹಿರೇಮಠ ಪ್ರತಿಷ್ಠಾನದ ವತಿಯಿಂದ ಡಾ. ಬಸವಲಿಂಗ ಪಟ್ಟದೇವರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಡಾ. ಮಕ್ತುಂಬಿ ಎಂ. ತಿಳಿಸಿದ್ದಾರೆ.

ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ, ನಾಡೋಜ ಡಾ. ಬಸವಲಿಂಗ ಪಟ್ಟದೇವರ ಹಾಗೂ ಪೀಠಾಧಿಪತಿ ಗುರುಬಸವ ಪಟ್ಟದೇವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.

2026ನೇ ಸಾಲಿನ ಡಾ. ಬಸವಲಿಂಗ ಪಟ್ಟದೇವರ ಸಾಹಿತ್ಯ ಪ್ರಶಸ್ತಿಗೆ ಕಲಬುರಗಿಯ ಸಾಹಿತಿ ಡಾ. ಕೆ.ಎಸ್. ಬಂಧು ಅವರು ಆಯ್ಕೆಯಾಗಿದ್ದು, ಬೀದರ್ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಎಸ್. ಬಿರಾದಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಬಂಡೆಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಶ್ರಾವಣ ಮಾಸದ ಪ್ರವಚನ ಸೇವಾ ಸಮಿತಿಯ ಅಧ್ಯಕ್ಷೆ ಸ್ವರೂಪಾ ಬಳತೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೀಪಕ್ ಠಮಕೆ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News