ಬೀದರ್: ಸಿಡಿಲು ಬಡಿದು 11 ಕುರಿಗಳು ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ಬೇಮಳಖೇಡಾ ಗ್ರಾಮದ ಸಮೀಪದ ಹೊಲವೊಂದರಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮೃತಪಟ್ಟ ಕುರಿಗಳು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಳೋಳ್ಳಿ ಗ್ರಾಮದ ಯಂಕಪ್ಪ ಪೂಜಾರಿ ಅವರಿಗೆ ಸೇರಿವೆ ಎಂದು ತಿಳಿದು ಬಂದಿದೆ.

ಯಂಕಪ್ಪ ಅವರು ಕುರಿ ಮೇಯಿಸುವ ಉದ್ದೇಶದಿಂದ ಯಾದಗಿರಿ ಜಿಲ್ಲೆಯಿಂದ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಬೇಮಳಖೇಡಾ ಗ್ರಾಮಕ್ಕೆ ಬಂದಿದ್ದರು. ಮಂಗಳವಾರ ಗ್ರಾಮದ ಹೊರವಲಯದಲ್ಲಿ ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಏಕಾಏಕಿ ಮಳೆಯೊಂದಿಗೆ ಸಿಡಿಲು ಬಡಿದಿದ್ದು, 11 ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ.

ಘಟನೆಯಿಂದ ಕುರಿಗಾಹಿ ಯಂಕಪ್ಪ ಪೂಜಾರಿ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮ ಸಹಾಯಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧಿತ ಇಲಾಖೆಗೆ ವರದಿ ಸಲ್ಲಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor