Bidar | 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ್ ಖಂಡ್ರೆ

Update: 2026-08-15 13:29 IST

ಬೀದರ್ : 80ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ ಸುಮಾರು 9 ಗಂಟೆಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮವು ವಂದೇ ಮಾತರಂ ಗೀತೆ ಹಾಡುವ ಮೂಲಕ ಪ್ರಾರಂಭಿಸಲಾಯಿತು. ಬಳಿಕ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಂದ ಧ್ವಜಾರೋಹಣ ನೆರವೇರಿಸಿದ ನಂತರ ರಾಷ್ಟ್ರಗೀತೆ ಹಾಡುವ ಮೂಲಕ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲಾಯಿತು.

ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಸೇವಾ ದಳ, ಸೇರಿದಂತೆ ಸುಮಾರು 12 ತುಕಡಿಗಳಿಂದ ಪಥ ಸಂಚಲನ ನಡೆಸಿ ಗೌರವ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕರಾದ ಶೈಲೆಂದ್ರ ಬೇಲ್ದಾಳೆ, ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಸುರೇಖಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಬುಡಾ ಅಧ್ಯಕ್ಷ ಬಸವರಾಜ್ ಜಾಬಶೇಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News