×
Ad

ಬೀದರ್ | 5 ಅಂತರ್‌ ರಾಜ್ಯ ಕಳ್ಳರ ಬಂಧನ

Update: 2025-03-23 15:23 IST

ಬೀದರ್ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನೂತನವಾಗಿ ಸ್ಥಾಪಿತಗೊಂಡ ಕಂಟ್ರೋಲ್ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿಟಿವಿ ಕ್ಯಾಮರಾದ ಸಹಾಯದಿಂದ 5 ಜನ ಅಂತರರಾಜ್ಯ ಕಳ್ಳರನ್ನು ಬಂಧಿಸಲಾಗಿದೆ.

ಆರೋಪಿಗಳು ಕಳವು ಮಾಡಲು ಬಳಸಿದ ವಾಹನ ಖಚಿತಪಡಿಸಿಕೊಂಡು ಹುಮನಾಬಾದ್ ತಾಲ್ಲೂಕಿನ ಧುಮ್ಮನಸೂರ್ ಗ್ರಾಮದ ಹತ್ತಿರ ಕಳ್ಳರನ್ನು ವಶಕ್ಕೆ ಪಡೆಯಲಾಗಿದೆ. ಅವರಿಂದ 42,500 ರೂ. ಮತ್ತು ಕೃತ್ಯಕ್ಕೆ ಬಳಸಿದ 8 ಲಕ್ಷ ರೂ. ಮೌಲ್ಯದ ಎರಡು ಕಾರು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಆರೋಪಿಗಳು ಬೀದರ್ ಗ್ರಾಮೀಣ ಪೊಲೀಸ್ ಠಾಣೆ ಮತ್ತು ತೆಲಂಗಾಣಾ ರಾಜ್ಯದ ಜಹಿರಾಬಾದ್ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣಗಳಲ್ಲಿ ಬಾಗಿಯಾಗಿದ್ದರು. ಇವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಅಂತರ್‌ ರಾಜ್ಯ ಕಳ್ಳರ ಬಂಧನಕ್ಕೆ ಚಾಣಾಕ್ಷತೆಯಿಂದ ಕಾರ್ಯ ನಿರ್ವಹಿಸಿದ ಹುಮನಾಬಾದ್ ಉಪ ವಿಭಾಗಾಧಿಕಾರಿ ಮತ್ತು ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಶ್ಲಾಘಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News