ಬೀದರ್ : 79ನೇ ಕಲ್ಯಾಣ ಕರ್ನಾಟಕ ದಿನಾಚರಣೆ; ಧ್ವಜಾರೋಹಣ ನಡೆಸಿದ ಸಚಿವ ಈಶ್ವರ್ ಖಂಡ್ರೆ
ಬೀದರ್ : 79ನೇ ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ನಗರದ ನೆಹರು ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮವು ವಂದೇ ಮಾತರಂ ಗೀತೆ ಹಾಡುವ ಮೂಲಕ ಪ್ರಾರಂಭಿಸಲಾಯಿತು. ನಂತರ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆ ಹಾಡುವ ಮೂಲಕ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲಾಯಿತು.
ಪೊಲೀಸ್ ಇಲಾಖೆ, ಅಬಕಾರಿ, ಎನ್ ಸಿ ಸಿ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಸೇವಾ ದಳ, ಸ್ಕೌಟ್ಸ್, ಗೈಡ್ಸ್ ಸೇರಿದಂತೆ ಸುಮಾರು 10 ತುಕಡಿಗಳಿಂದ ಪಥ ಸಂಚಲನ ನಡೆಸಿ ಗೌರವ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕರಾದ ರಹೀಂ ಖಾನ್, ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಎಂ. ಜಿ. ಮೂಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ್ ವಿಠಲರಾವ್, ಎಸ್ಪಿ ಪ್ರದೀಪ್ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತಕುಮಾರ್ ಪಾಟೀಲ್, ಬುಡಾ ಅಧ್ಯಕ್ಷ ವಿನೋದ್ ಅಪ್ಪೆ ಸೇರಿದಂತೆ ಇತರರಿದ್ದರು.