×
Ad

ಬೀದರ್ | ಅಕ್ರಮವಾಗಿ ಸಾಗಿಸುತ್ತಿದ್ದ 8 ಕ್ವಿಂಟಲ್ ಪಡಿತರ ಅಕ್ಕಿ ವಶ

Update: 2025-09-21 20:41 IST

ಬೀದರ್: ಅಕ್ರಮವಾಗಿ ಸಾಗಿಸುತ್ತಿದ್ದ 8 ಕ್ವಿಂಟಲ್ ಪಡಿತರ ಅಕ್ಕಿಯನ್ನು ಕಮಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಔರಾದ್–ಕಮಲನಗರ್ ರಸ್ತೆ ಮೂಲಕ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿರುವ ಮಾಹಿತಿ ಮೇರೆಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಲ್ಲಿ, ಪಿಎಸ್ಐ ಆಶಾ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.

ದಾಳಿಯ ವೇಳೆ 8 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಿದ ವಾಹನವನ್ನು ವಶಕ್ಕೆ ಪಡೆಯಲಾಯಿತು. ಆದರೆ, ವಾಹನ ಚಾಲಕನು ಪೊಲೀಸ್ ವಾಹನವನ್ನು ಕಂಡ ತಕ್ಷಣ ಸ್ಥಳದಿಂದ ಪರಾರಿಯಾದನು ಎಂದು ತಿಳಿದು ಬಂದಿದೆ.

ಈ ಕುರಿತು ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News