×
Ad

Bidar | 9 ಕೋಟಿ ರೂ. ವೆಚ್ಚದಲ್ಲಿ 9 ಕಿ.ಮೀ ರಸ್ತೆ ನಿರ್ಮಾಣಕ್ಕೆ ಸಂಸದ ಸಾಗರ್ ಖಂಡ್ರೆ ಚಾಲನೆ

Update: 2026-03-07 20:15 IST

ಬೀದರ್: ಲೋಕಸಭಾ ಕ್ಷೇತ್ರದ ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಭಾಲ್ಕಿ ತಾಲೂಕಿನ ಇಂಚೂರ್–ಲಾಧಾ–ಕುಂಟೆಗಾವ್–ಮೊರಂಬಿ ಗ್ರಾಮಗಳನ್ನು ಸಂಪರ್ಕಿಸುವ ಸುಮಾರು 9 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಸಂಸದ ಸಾಗರ್ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಸುಮಾರು 9 ಕೋಟಿ ರೂ. ಅನುದಾನದಡಿ ಗ್ರಾಮ ರಸ್ತೆಯನ್ನು ಎಂಡಿಆರ್ ರಸ್ತೆಯಾಗಿ ಪರಿವರ್ತಿಸಿ, ಏಕಮಾರ್ಗ ರಸ್ತೆಯನ್ನು ಎರಡು ಮಾರ್ಗದ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಇಂಚೂರ್ ಗ್ರಾಮದಲ್ಲಿ ಚಾಲನೆ ನೀಡಲಾಯಿತು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಉತ್ತಮ ರಸ್ತೆ ಸಂಪರ್ಕ ಅತ್ಯಂತ ಅಗತ್ಯವಾಗಿದೆ. ಈ ರಸ್ತೆ ಅಭಿವೃದ್ಧಿಯಿಂದ ಇಂಚೂರ್, ಲಾಧಾ, ಕುಂಟೆಗಾವ್, ಮೊರಂಬಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುಗಮ ಸಂಚಾರ ಸೌಲಭ್ಯ ದೊರೆಯಲಿದೆ. ಕೃಷಿ ಉತ್ಪನ್ನಗಳ ಸಾಗಣೆ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ದಿನನಿತ್ಯದ ಸಂಚಾರಕ್ಕೂ ಈ ರಸ್ತೆ ಬಹಳ ಸಹಕಾರಿಯಾಗಲಿದೆ ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News