ಬೀದರ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಸಹಕಾರ ವಿಭಾಗದ ಬೀದರ್ ಜಿಲ್ಲಾಧ್ಯಕ್ಷರಾಗಿ ಅಭಿಷೇಕ್ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅನುಮೋದನೆಯ ಮೇರೆಗೆ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷ ಧನರಾಜ್ ಎಸ್. ತಾಳಂಪಳ್ಳಿ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಸಹಕಾರ ವಿಭಾಗದ ಮಾರ್ಗದರ್ಶನ ಹಾಗೂ ಜಿಲ್ಲಾ ಅಥವಾ ಬ್ಲಾಕ್ ಕಾಂಗ್ರೆಸ್ ಸಮಿತಿಗಳು ಮತ್ತು ಹಿರಿಯ ಮುಖಂಡರ ಸಹಯೋಗದೊಂದಿಗೆ ಕ್ಷೇತ್ರದಲ್ಲಿ ಪಕ್ಷದ ಸಹಕಾರ ವಿಭಾಗವನ್ನು ಸಂಘಟಿಸಿ, ಬಲವರ್ಧನೆಗೆ ಕಾರ್ಯೋನ್ಮುಖರಾಗುವಂತೆ ನೂತನ ಅಧ್ಯಕ್ಷರಿಗೆ ಸೂಚಿಸಲಾಗಿದೆ.

ಅಭಿಷೇಕ್ ಪಾಟೀಲ್ ಅವರ ನೇಮಕಾತಿಗೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor