×
Ad

ಬೀದರ್‌ನ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್ ವರ್ಗಾವಣೆ

Update: 2025-06-23 20:32 IST

ಬೀದರ್ : ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಹೆಚ್. ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ತೆರವಾದ ಅಪರ ಜಿಲ್ಲಾಧಿಕಾರಿ ಹುದ್ದೆಗೆ ಡಾ.ಈಶ್ವರ್ ಉಳ್ಳಾಗಡ್ಡಿ ಅವರನ್ನು ನೇಮಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಲಾಗಿದೆ.

ಹಾಗೆಯೇ ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವೆ ಸುರೇಖಾ ಕೆ.ಎ.ಎಸ್. ಅವರನ್ನು ಕೂಡ ವರ್ಗಾವಣೆ ಮಾಡಿ, ಬೀದರ್ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರನ್ನಾಗಿ ಆದೇಶಿಸಲಾಗಿದೆ.

ವರ್ಗಾವಣೆಯಾದ ಶಿವಕುಮಾರ್ ಶೀಲವಂತ್ ಅವರನ್ನು ದಾವಣಗೆರೆ ಜೆಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News