×
Ad

ಬೀದರ್ | ಜೂ.21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್ ಸೂಚನೆ

Update: 2025-06-17 19:56 IST

ಬೀದರ್ : ಜೂ.21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಒಂದು ಭೂಮಿ, ಒಂದು ಆರೋಗ್ಯ ಎಂಬ ಧ್ಯೇಯವಾಕ್ಯದೊಂದಿಗೆ ಆಚಾರಿಸಲಾಗುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೂ.21 ರಂದು ಬೆಳಿಗ್ಗೆ 6:30 ರಿಂದ 8 ಗಂಟೆವರೆಗೆ ನಗರದ ಕೋಟೆ ಆವರಣದಲ್ಲಿ ಕಾರ್ಯಕ್ರಮ ಜರುಗುತ್ತದೆ ಎಂದು ಹೇಳಿದ ಅವರು, ಹೈಸ್ಕೂಲ್, ಪಿಯುಸಿ, ಪದವಿ ಸೇರಿ 500 ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದೇ ರೀತಿ ಎನ್‌ಸಿಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ಬ್ರೀಮ್ಸ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಕೂಡ ಭಾಗವಹಿಸುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

ಪೋಲಿಸ್ ಇಲಾಖೆ ವತಿಯಿಂದ ಬಂದೋಬಸ್ತ್ ನೀಡಲಾಗುವುದು. ಹಾಗೆಯೇ ನಗರಸಭೆ ವತಿಯಿಂದ ಕುಡಿಯುವ ನೀರು, ಸ್ವಚ್ಛತೆಗೆ ಅಗತ್ಯ ಕ್ರಮಕೈಕೊಳ್ಳಬೇಕು. ಕಾರ್ಯಕ್ರಮದಲ್ಲಿ ಕೋವಿಡ್-19 ರ ಮಾರ್ಗಸೂಚಿ ಪಾಲನೆ ಮಾಡಲಾಗುವುದು ಎಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಖುತಿಜಾ ಬೇಗಂ, ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ್ ಬಿರಾದಾರ್ ಹಾಗೂ ಕ್ರಿಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಮಠ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News