Bidar | ಜೂ.1 ರಿಂದ ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆ
ಸಾಂದರ್ಭಿಕ ಚಿತ್ರ | Photo Credit : PTI
ಬೀದರ್ : ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನಾ ನೇಮಕಾತಿಗಾಗಿ 2026ನೇ ಸಾಲಿನ ಅಗ್ನಿವೀರ್ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ದಿನಾಂಕಗಳನ್ನು ಘೋಷಿಸಲಾಗಿದೆ. ಅಧಿಕೃತ ಪ್ರಕಟಣೆಯ ಪ್ರಕಾರ ಈ ಲಿಖಿತ ಪರೀಕ್ಷೆಗಳು 2026ರ ಜೂ.1 ರಿಂದ ಪ್ರಾರಂಭವಾಗಿ ಜೂ.12ರ ವರೆಗೆ ಜರುಗಲಿವೆ ಎಂದು ಬೆಂಗಳೂರಿನ ಪ್ರಧಾನ ನೇಮಕಾತಿ ವಲಯದ ನಿರ್ದೇಶಕ ಕರ್ನಲ್ ಎ.ಕೆ.ಉಪಾಧ್ಯಾಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಈಗಾಗಲೇ ಭಾರತೀಯ ಸೇನೆಯ ಅಧಿಕೃತ ವೆಬ್‍ಸೈಟ್ 'Join Indian Army' ನಲ್ಲಿ ಅಪ್‍ಲೋಡ್ ಮಾಡಲಾಗಿದೆ. ಅಭ್ಯರ್ಥಿಗಳು ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಅಡ್ಮಿಟ್ ಕಾರ್ಡ್ ಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಅಂದರೆ 2025 ರಲ್ಲಿ ನಡೆಸಲಾದ ಇದೇ ನೇಮಕಾತಿ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿದ್ದು, ಒಟ್ಟು ಆರು ಜಿಲ್ಲೆಗಳಿಂದ ಆಯ್ಕೆಯಾದ 3,400 ಅಭ್ಯರ್ಥಿಗಳನ್ನು ಯಶಸ್ವಿಯಾಗಿ ವಿವಿಧ ತರಬೇತಿ ಕೇಂದ್ರಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.