ಬೀದರ್‌: ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಕುರಿತು ಸಾಮಾಜಿಕ ಮಾಧ್ಯಮಗಳ ಮುಂದೆ ಹಗುರವಾಗಿ ಮಾತನಾಡಿದ ಸಮುದಾಯ ಆರೋಗ್ಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಸೋಮವಾರ ಸಲ್ಲಿಸಿದ ಮನವಿಯಲ್ಲಿ, ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳ ಕೇಂದ್ರ ಸಂಘದ ಕೆಲವರು ಸಾಮಾಜಿಕ ಮಾಧ್ಯಮಗಳ ಮುಂದೆ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಕುರಿತು ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಬಂಧಪಟ್ಟವರನ್ನು ಸೇವೆಯಿಂದ ವಜಾಗೊಳಿಸಬೇಕು. ಅಲ್ಲದೆ, ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘವು ಮಾಧ್ಯಮಗಳ ಎದುರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿದೆ.

ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಸುನಿಲ್ ಕಸ್ತೂರೆ, ಪ್ರಧಾನ ಕಾರ್ಯದರ್ಶಿ ವಿವೇಕ್ ಸ್ವಾಮಿ, ಖಜಾಂಚಿ ಅಲಿಮೋದ್ದಿನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷೆ ಶಕುಂತಲಾ ದಂಡೆ, ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮೀ ಧಮಲಾ, ಖಜಾಂಚಿ ಜರೀನಾ ಬೇಗಂ, ಪಾರ್ವತಿ ಸೊನಾರೆ, ಬಸಮ್ಮ, ರೇಣುಕಾ, ಸುಲೋಚನಾ, ವಿಲ್ಸನ್ ಸಾಲೋಮನ್, ವಿದ್ಯಾಸಾಗರ್, ಸಂಗಮೇಶ್ ರೆಡ್ಡಿ, ಶಿವಪ್ಪ ಗುಮ್ಮಾ ಭೂಷಣ, ವೀರಶೆಟ್ಟಿ ಚನ್ನಶೆಟ್ಟಿ, ಶಿವಾನಂದ್ ಸ್ವಾಮಿ, ಜಾವೇದ್, ರಫಿಯೋದ್ದಿನ್, ವಿಲ್ಸನ್, ಕೇದಾರನಾಥ್, ವಹೀದ್ ಪರ್ವೇಜ್ ಹಾಗೂ ಸಂಗಮೇಶ್ ಕುಡ್ಲೇ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor