×
Ad

ಬೀದರ್ | ಮೈಸಲಗಾ ಗ್ರಾಮದಲ್ಲಿ ಆಕ್ರಮ ಮದ್ಯ ಮಾರಾಟ ಆರೋಪ; ಕ್ರಮ ಕೈಗೊಳ್ಳಲು ಮನವಿ

Update: 2025-06-25 21:05 IST

ಬೀದರ್ : ಬಸವಕಲ್ಯಾಣ ತಾಲ್ಲೂಕಿನ ಮೈಸಲಗಾ ಗ್ರಾಮದಲ್ಲಿ ನಡೆಯುತ್ತಿರುವ ಆಕ್ರಮ ಮದ್ಯ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಎಸ್ಪಿ ಪಕ್ಷ ಮತ್ತು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇಂದು ತಾಲ್ಲೂಕಿನ ಅಬಕಾರಿ ಇಲಾಖೆಯ ಉಪನಿರೀಕ್ಷಕರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಬಸವಕಲ್ಯಾಣ ತಾಲ್ಲೂಕಿನ ಮೈಸಲಗಾ ಗ್ರಾಮದ ಕಿರಾಣಿ ಅಂಗಡಿ, ಪಾನ್ ಶಾಪ್, ಪಾನ್ ಡಬ್ಬಾ ಹೀಗೆ ಎಲ್ಲ ಅಂಗಡಿಗಳಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಗ್ರಾಮದಲ್ಲಿನ ಯುವಕರು ಮತ್ತು ಹಿರಿಯರು ಕುಡಿತಕ್ಕೆ ಬಲಿಯಾಗಿ, ಸಂಸಾರವನ್ನು ಬೀದಿಗೆ ತರುತ್ತಿದ್ದಾರೆ ಎಂದು ದೂರಲಾಗಿದೆ.

ಇದರ ಬಗ್ಗೆ ಮೊದಲು ಕೂಡ ಮನವಿ ಪತ್ರ ಸಲ್ಲಿಸಿದ್ದು, ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆದಷ್ಟು ಬೇಗ ಇದರ ವಿರುದ್ಧ ಕ್ರಮ ಕೈಗೊಂಡು ಗ್ರಾಮಸ್ಥರಿಗೆ ನೆಮ್ಮದಿಯ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ಬಿಎಸ್ಪಿ ಪಕ್ಷದ ತಾಲ್ಲೂಕು ಅಧ್ಯಕ್ಷ ಶಂಕರ್ ಫುಲೆ ಹಾಗೂ ಗ್ರಾಮಸ್ಥ ದಿನೇಶ್ ಸೇರಿದಂತೆ ಗ್ರಾಮದ ಇತರ ಮಹಿಳೆಯರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News