×
Ad

ಬೀದರ್ | ನಗರಸಭೆಯ ವಿವಿಧ ಯೋಜನೆಗಳಲ್ಲಿ ಅವ್ಯವಹಾರ ಆರೋಪ : ಕೆಆರ್‌ಡಿಎಸ್‌ಎಸ್ ಪ್ರತಿಭಟನೆ

Update: 2025-09-01 17:27 IST

ಬೀದರ್ : ನಗರಸಭೆಯ ವಿವಿಧ ಯೋಜನೆಗಳಲ್ಲಿ ಅವ್ಯವಹಾರವನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಪ್ರತಿಭಟನೆ ನಡೆಸಿತು.

ಇಂದು ಅಂಬೇಡ್ಕರ್ ವೃತ್ತದಿಂದ ನಗರಸಭೆ ಕಾರ್ಯಾಲಯದವರೆಗೆ ಪ್ರತಿಭಟನೆ ನಡೆಸಿ, ಪೌರಾಯುಕ್ತರ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ನಗರಸಭೆಯಲ್ಲಿ ವಿವಿಧ ಯೋಜನೆಗಳಲ್ಲಿ ಅವ್ಯವಹಾರ ನಡೆದಿದೆ. 15ನೇ ಹಣಕಾಸು ಮತ್ತು ಎಸ್ಎಫ್‌ಸಿ ಅನುದಾನದಲ್ಲಿ ಆದ ಅವ್ಯವಹಾರ ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಯಿತು.

ಮನೆ ದುರಸ್ಥಿಗಾಗಿ ಬಳಸುವ ದಲ್ಲಾಳಿಗಳ ಮೂಲಕ ಲೂಟಿ ಮಾಡಲಾಗುತ್ತಿದೆ. ನಗರದಲ್ಲಿ ಸ್ವಚ್ಛತೆ ಮಾಡದೆ ಕೋಟ್ಯಂತರ ರೂಪಾಯಿ ಲೂಟಿ ಮಾಡಲಾಗುತ್ತಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ತುಂಬಿದೆ. ನಗರದಲ್ಲಿ ಒಳಚರಂಡಿ ಸ್ವಚ್ಛಗೊಳಿಸುತ್ತಿಲ್ಲ. ಚರಂಡಿಯ ನೀರು ರಸ್ತೆಯ ಮೇಲೆ ಬಂದು ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು 3-4 ದಿನಗಳಿಂದ ನಗರದಲ್ಲಿ ಧಾರಾಕಾರ ಮಳೆಯಾಗಿದ್ದು, ನಗರದ ಹಲವಾರು ಬಡಾವಣೆಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ರಸ್ತೆಗಳಲ್ಲಿರುವ ಗುಂಡಿ ಮುಚ್ಚಿ ರಸ್ತೆ ದುರಸ್ಥಿ ಮಾಡಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.

ನಗರಸಭೆಯಲ್ಲಿ ನಡೆದ ಅವ್ಯವಹಾರದ ತನಿಖೆಗೆ ತಂಡ ರಚನೆ ಮಾಡಿ ಸಮಗ್ರ ತನಿಖೆ ಕೈಗೊಳ್ಳುವ ಮೂಲಕ ಭ್ರಷ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕಲಬುರ್ಗಿ ವಿಭಾಗೀಯ ಸಂಚಾಲಕ ಉಮೇಶಕುಮಾರ್ ಸ್ವಾರಳ್ಳಿಕರ್, ರಾಜ್ಯ ಉಪಾಧ್ಯಕ್ಷ ರಾಜಕುಮಾರ್ ಮೂಲಭಾರತಿ, ಜಿಲ್ಲಾ ಸಂಚಾಲಕರಾದ ಪ್ರಕಾಶ್ ಭಂಗಾರೆ, ಬಾಬುರಾವ್ ಕೌಠಾ, ದಿನೇಶ್ ಶಿಂಧೆ, ಕಲ್ಲಪ್ಪಾ ಚಾಂಬೋಳಕರ್, ವಿಜಯ್ ಸಾಮ್ರಾಟ್, ದೇವರಾಜ್ ಡಾಕುಳಗಿ, ಅಶೋಕ್ ಸಂಗಮ ಹಾಗೂ ಗೋವಿಂದ್ ಬಡಿಗೇರ್ ಸೇರಿದಂತೆ ಅನೇಕರು ಇದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News