ಬೀದರ್ | ಕನ್ನಡ ಜಾಗೃತಿ ಸಮಿತಿಯ ಸದಸ್ಯರಾಗಿ ಅಂಬರೀಶ್ ಮಲ್ಲೇಶಿ ನಾಮನಿರ್ದೇಶನ
Update: 2025-09-13 17:24 IST
ಬೀದರ್ : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾಗಿ ಅಂಬರೀಶ್ ಮಲ್ಲೇಶಿ ಅವರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದ 11 ಮಹಾನಗರ ಪಾಲಿಕೆ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ರಾಜ್ಯದ 30 ಜಿಲ್ಲೆಗಳ ಜಿಲ್ಲಾ ಮಟ್ಟದಲ್ಲಿ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ.