×
Ad

ಬೀದರ್ | ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ : ಪಿಡಿಒ ಗೋದಾವರಿ

Update: 2025-10-15 16:59 IST

ಬೀದರ್ : ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ ಕಾರ್ಯನಿರ್ವಹಿಸುತ್ತಾರೆ ಎಂದು ಯರನಳ್ಳಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಗೋದಾವರಿ ಅವರು ತಿಳಿಸಿದರು.

ಬೀದರ್ ತಾಲೂಕಿನ ಯರನಳ್ಳಿ ವಲಯದ ಅಂಗನವಾಡಿ ಕೇಂದ್ರ ಸಂಖ್ಯೆ-1 ರಲ್ಲಿ ರಾಷ್ಟ್ರೀಯ ಪೋಷಣ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಕಾರ್ಯಕ್ರಮದ ಉದ್ದೇಶ ಪೌಷ್ಟಿಕ ಆಹಾರದ ಮಹತ್ವ ತಿಳಿಸುವುದಾಗಿದೆ. ಮಕ್ಕಳ ಅಪೌಷ್ಟಿಕತೆ ನಿವಾರಣೆ, ರಕ್ತಹೀನತೆ ತಡೆಗಟ್ಟುವುದು ಹಾಗೂ ಗರ್ಭಿಣಿ ಬಾಣಂತಿಯರ ಆರೈಕೆಯ ಕುರಿತು ಅರಿವು ಮೂಡಿಸುವುದಾಗಿದೆ. ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಬಹು ಉಪಯುಕ್ತ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪೋಷಣ ಮಾಸದ ಅಂಗವಾಗಿ ಅನ್ನಪ್ರಸಾದ, ಸಹಪೋಷಣೆ, ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮತ್ತು ಮಕ್ಕಳ ಬೆಳವಣಿಗೆ ಕುರಿತು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಹನಿಸಬೇಗಂ ಹಾಗೂ ಮೇಲ್ವಿಚಾರಕಿ ಪ್ರೇಮಲತಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಮತ್ತು ಆರೋಗ್ಯ ಸಿಬ್ಬಂದಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News