×
Ad

ಬೀದರ್ | ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಲು ಮನವಿ

Update: 2025-07-07 16:48 IST

ಬೀದರ್ : ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಬೇಕು ಎಂದು ಭಾರತೀಯ ದಲಿತ್ ಪ್ಯಾಂಥರ್ ಮನವಿ ಮಾಡಿದೆ.

ಇಂದು ಹುಮನಾಬಾದ್ ತಹಶೀಲ್ದಾರ್ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯವು ಡಾ.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದಕ್ಕಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೆ ಕೆಲವೊಂದು ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಹಾಕಿರುವುದಿಲ್ಲ ಎಂದು ಆರೋಪಿಸಲಾಗಿದೆ.

ಉಚ್ಚ ನ್ಯಾಯಾಲಯದ ಆದೇಶದಂತೆ ಡಾ.ಅಂಬೇಡ್ಕರ್ ಅವರ ಫೋಟೋ ಎಲ್ಲಾ ನ್ಯಾಯಾಲಯಗಳ ಜೊತೆಗೆ ಹುಮನಾಬಾದ್ ನ್ಯಾಯಾಲಯದಲ್ಲಿಯೂ ಕೂಡ ಹಾಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಭಾರತೀಯ ದಲಿತ್ ಪ್ಯಾಂಥರ್ ನ ತಾಲೂಕು ಅಧ್ಯಕ್ಷ ಗಣಪತಿ ಅಷ್ಟೂರೆ, ಉಪಾಧ್ಯಕ್ಷ ಸಿದ್ದಾರ್ಥ್ ಜಾನವೀರ್, ಸುನಿಲಕುಮಾರ್ ಭೋಲಾ, ವಿಶಾಲ್ ಸಿಂಧನಕೇರಾ, ಗೌತಮ್ ಜಾನವೀರ್, ಅನಂತ್ ಮಾಳಗೆ, ವಿಠಲ್ ಶಿವನಾಯಕ್, ಆಕಾಶ್, ದಶರಥ್ ದಾಂಡೇಕರ್, ರಾಹುಲ್, ಗೌತಮ್ ಮೊಳಕೇರಾ, ಮಾಣಿಕ್ ಮೇಟಿ ಹಾಗೂ ಸಾಗರ್ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News