ಬೀದರ್ | ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆಗೊಳಿಸಲು ಮನವಿ
ಬೀದರ್ : ಭಾಲ್ಕಿ ತಾಲ್ಲೂಕಿನ ಪ್ರಥಮ ದರ್ಜೆಯಲ್ಲಿ ಉತ್ತಿರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇಲ್ಲಿವರೆಗೂ ಪ್ರೋತ್ಸಾಹ ಧನ ಬಿಡುಗಡೆಗೊಳಿಸಲಿಲ್ಲ. ಆದಷ್ಟು ಬೇಗ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿ ಸಲ್ಲಿಸಿದೆ.
ಸಂಸದ ಸಾಗರ್ ಖಂಡ್ರೆ ಅವರ ಮೂಲಕ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಬೇರೆಲ್ಲ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆಗೊಳಿಸಿದರು ಕೂಡ, ಭಾಲ್ಕಿ ತಾಲ್ಲೂಕಿನ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇಲ್ಲಿವರೆಗೂ ಪ್ರೋತ್ಸಾಹ ಧನ ಬಿಡುಗಡೆಗೊಳಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಆರ್ಥಿಕವಾಗಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ನ ತಾಲ್ಲೂಕು ಸಂಚಾಲಕ ಮಹಾದೇವ್, ಸಹ ಸಂಚಾಲಕ ರವಿ ಭಾವಿದೊಡ್ಡಿ, ಕರಣ, ವಿಶಾಲ್ ಬಂಧು, ಅಭಿಷೇಕ್, ಪ್ರದೀಪ್, ಸೋಮನಾಥ್ ಹಾಗೂ ಅಮೂಲ್ ಸೇರಿದಂತೆ ಇತರರು ಇದ್ದರು.