ಬೀದರ್ | ಅರ್ಜಿ ಆಹ್ವಾನ
Update: 2025-02-10 18:02 IST
ಬೀದರ್ : 2025-26ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಬಳಗಿ, ಭಾಲ್ಕಿ, ಬೀದರ್(ನಗರ), ಹುಮನಾಬಾದ್ ನಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಪಲಾಪುರದಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಆಸಕ್ತರು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in ಆನ್ಲೈನ್ ಮೂಲಕ ಮಾ.10 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ಅಥವಾ ಸಂಬಂಧಪಟ್ಟ ವಸತಿ ಶಾಲೆಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.