ಬೀದರ್ | ಅರ್ಜಿ ಆಹ್ವಾನ
ಬೀದರ್ : ರಾಜ್ಯ ಬಾಲ ಕಾರ್ಮಿಕ ನಿರ್ಮೂಲನೆ ಕ್ರಿಯಾ ಯೋಜನೆ ಅನ್ವಯ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗ ಕಂ.ಕಚೇರಿ ಸಹಾಯಕರ ಹುದ್ದೆಯನ್ನು ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವವರು ಬಿಕಾಂ ಪದವಿಯನ್ನು ಹೊಂದಿರಬೇಕು, ಶೇ.60ರಷ್ಟು ಪ್ರತಿಶತ ಮೇಲ್ಪಟ್ಟಿರಬೇಕು, ಲೆಕ್ಕ ಪತ್ರಗಳನ್ನು ನಿರ್ವಹಿಸುವಲ್ಲಿ, ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಲೆಕ್ಕಪತ್ರದಲ್ಲಿ ಬ್ಯಾಂಕ್ ವ್ಯವಹಾರ, ಸರ್ಕಾರದ ಲೆಕ್ಕ ಪತ್ರ ತಯಾರಿಸುವ ಹಾಗೂ ಲೆಕ್ಕ ಪತ್ರಗಳಿಗೆ ಸಂಬಂಧಿಸಿದ ದಾಖಲೆ ರಿಜಿಸ್ಟರ್ ಗಳ ಕುರಿತು ಮಾಹಿತಿ ಹೊಂದಿರಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ಅರ್ಹರು ಅರ್ಜಿ ಸಲ್ಲಿಸಲು ನಿಗದಿತ ನಮೂನೆಗಳನ್ನು ನಗರದ ಶಿವನಗರದಲ್ಲಿರುವ ಯೋಜನಾ ನಿರ್ದೇಶಕರು, ಬಾಲ ಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು, (ಜಿಲ್ಲಾ ಬಾಲ ಕಾರ್ಮಿಕ ಯೋಜನೆ), ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿಯಲ್ಲಿ ಅರ್ಜಿ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಮಾ.12 ರ ಸಂಜೆ 5:30 ಗಂಟೆಯೊಳಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.