×
Ad

ಬೀದರ್ | ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

Update: 2025-09-01 18:42 IST

ಬೀದರ್ : 2025-26ನೇ ಶೈಕ್ಷಣಿಕ ಸಾಲಿಗೆ ಬೀದರ್ ನಗರ ಹಾಗೂ ಭಾಲ್ಕಿ ತಾಲೂಕಿನ ಲಖನಗಾಂವ್ ನಲ್ಲಿ ಹೊಸದಾಗಿ ಆರಂಭವಾಗಿರುವ ಡಾ.ಬಿ.ಆರ್.ಅಂಬೇಡ್ಕರ್‌ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ 2, ಆಂಗ್ಲ 2, ಹಿಂದಿ 2, ಗಣಿತ 2 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಆಯಾ ವಿಷಯದಲ್ಲಿ ಐಚ್ಛಿಕ ಅಧ್ಯಯನ ಪದವಿ ಹಂತದಲ್ಲಿ ಅಭ್ಯಾಸ ಮಾಡಿರಬೇಕು. ಬಿ.ಇಡಿ ಮತ್ತು ಟಿ.ಇ.ಟಿ. ಉತ್ತೀರ್ಣರಾಗಿರಬೇಕು. ಗಣಿತ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿ.ಎಸ್ಸಿ., ಬಿ.ಇಡಿ ಅಧ್ಯಯನ ಮಾಡಿರಬೇಕು. ಪದವಿ ಹಂತದಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳನ್ನು ಐಚ್ಛಿಕವಾಗಿ ಅಧ್ಯಯನ ಮಾಡಿದ್ದು, ಟಿ.ಇ.ಟಿ ಉತ್ತೀರ್ಣರಾಗಿರಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.

ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ತಮ್ಮ ಪ್ರಮಾಣ ಪತ್ರಗಳೊಂದಿಗೆ ಸೆ.4 ರ ಸಾಯಂಕಾಲ 5 ಗಂಟೆಯೊಳಗೆ ಬೀದರ್ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News