ಬೀದರ್ | ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬೀದರ್ : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ನೀಡಲು 18 ವರ್ಷದೊಳಗಿನ ಮಕ್ಕಳಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.
ಮಕ್ಕಳ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಾಂತ್ರಿಕತೆ, ಪರಿಸರ, ಕಲೆ ಮತ್ತು ಸಂಸ್ಕೃತಿ ಹಾಗೂ ಸಂಶೋಧನೆ (ಹೊಸ ಅವಿಷ್ಕಾರ) ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳು ಜು.31, 2025ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರುವ ಎಲ್ಲಾ ಮಕ್ಕಳು ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ 2025ಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಅರ್ಹರು ಅನ್‌ಲೈನ್ https://awards.gov.in ಮೂಲಕ ಜುಲೈ 31 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.