ಬೀದರ್ | ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
ಬೀದರ್ : ಜಿಲ್ಲೆಯ ಯುವನಿಧಿ ಫಲಾನುಭವಿಗಳಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ಮತ್ತು ಎಂಬ್ರಾಯಿಡರಿ ಹಾಗೂ ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಬೀದರ್ ಇವರ ಸಂಯುಕ್ತಾಶ್ರಯದಲ್ಲಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.
ಜ.31 ರಿಂದ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಯುವನಿಧಿಯಲ್ಲಿ ನೋಂದಾಯಿಸಿದ ಮಹಿಳಾ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದು. ಕಾರ್ಯಕ್ರಮದಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್ ಮತ್ತು ಎಂಬ್ರಾಯಿಡರಿ ಹಾಗೂ ಟೈಲರಿಂಗ್ ವೃತ್ತಿಯಲ್ಲಿ ಕೌಶಲ್ಯದ ಪ್ರಾಯೋಗಿಕ ಸಿದ್ಧಾಂತದೊಂದಿಗೆ ಸ್ವಯಂ ಉದ್ಯಮಗಳ ಬಗ್ಗೆ ತರಬೇತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9743012315 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.