ಬೀದರ್ | ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬೀದರ್ : ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆ ಹಾಗೂ ವ್ಯಕ್ತಿಗಳನ್ನು ಒಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವ ಅಪಾಯದಿಂದ ಪಾರು ಮಾಡಿರುವ ಮಹಿಳೆಯರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
2024-25ನೇ ಸಾಲಿನ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷವು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಇಲಾಖೆಯ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದ್ದಾರೆ.
ಅರ್ಹರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಮೈಲೂರ, ಬೀದರ್ ನಿಂದ ಅರ್ಜಿ ಪಡೆದು, ಭರ್ತಿ ಮಾಡಿ, ಎಲ್ಲಾ ದಾಖಾಲಾತಿಗಳನ್ನು ದೃಢೀಕರಿಸಿ ದ್ವಿ ಪ್ರತಿಯಲ್ಲಿ ಜ.1ರಿಂದ ಜ.15 ರ ಸಾಯಂಕಾಲ 5:30 ಗಂಟೆಯ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.