×
Ad

ಬೀದರ್ | ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನ

Update: 2025-09-10 17:17 IST

ಬೀದರ್ : 2025-26ನೇ ಸಾಲಿನ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಎಣ್ಣೆಕಾಳು ಕೋಯ್ಲೋತ್ತರ ಘಟಕಕ್ಕೆ ಮೂಲ ಸೌಕರ್ಯ ಕಲ್ಪಿಸಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು, ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲ ಆಗುವಂತೆ ಹಾಗೂ ಎಣ್ಣೆಕಾಳು ಬೆಳೆ ಉತ್ತೇಜಿಸಲು ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಎಣ್ಣೆ ಕಾಳು ಕೋಯ್ಲೋತ್ತರ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣ ಖರೀದಿಸಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳು ವಿಸ್ತೀರ್ಣ ಯೋಜನಾ ವರದಿಯೊಂದಿಗೆ ಅರ್ಜಿ ಸಲ್ಲಿಸಬಹುದು. ಯೋಜನಾ ವರದಿಯು ಶೇ.33 ರಷ್ಟು ಅಥವಾ 9.99 ಲಕ್ಷ ರೂ. ಮೀರದಂತೆ ಸಹಾಯಧನ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಅರ್ಜಿಗಳನ್ನು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲಿಸಿ, ಅರ್ಹ ಫಲಾನುಭವಿಗಳನ್ನು ಕಾರ್ಯಕಾರಿ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News