ಬೀದರ್ | ಮುದ್ರಾ ಯೋಜನೆಯಡಿ ಅರ್ಜಿ ಆಹ್ವಾನ
Update: 2025-04-24 21:06 IST
ಬೀದರ್ : 2025-26ನೇ ಸಾಲಿನ ಜಿಲ್ಲೆಯ ಕೈ ಮಗ್ಗ ನೇಕಾರರಿಗೆ ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾತಿಗಾಗಿ ಬ್ಯಾಂಕ್ ಗಳಿಗೆ ಶಿಫಾರಸ್ಸು ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಕೈ ಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿಳಾಸ :
ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು, ರೇಷ್ಮೇ ಇಲಾಖೆ ಕಚೇರಿ ಕಟ್ಟಡ, 2ನೇ ಮಹಡಿ, ಕೋಳಾರ(ಕೆ), ಬೀದರ್-585402, ಇವರ ಕಚೇರಿಗೆ ಸಲ್ಲಿಸಿ ಇದರ ಸದುಪಯೋಗ ಪಡೆಯಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.