×
Ad

ಬೀದರ್ | ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಜಿ ಆಹ್ವಾನ

Update: 2025-08-07 17:54 IST

ಬೀದರ್ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಫಲಾನುಭವಿಗಳಿಗೆ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿಸಾಕಾಣಿಕೆ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ ಮತ್ತು ಪುಡ್ ಕಾರ್ಟ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ) ಯೋಜನೆ, ಉದ್ಯಮಶೀಲತಾ ಯೋಜನೆ(ಇತರೆ ಉದ್ದೇಶ) ಹಾಗೂ ಮೈಕ್ರೋ ಕ್ರೇಡಿಟ್ ಕಿರುಸಾಲ ಯೋಜನೆ, ಮತ್ತು ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಿಗೆ 2025-26ನೇ ಸಾಲಿನಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿ ಎಂದು ಅವರು ಮಾಹಿತಿ ನೀಡಿದ್ದಾರೆ.

ಅರ್ಜಿ ಸಲ್ಲಿಸಬೇಕಾದ ಅರ್ಹ ಫಲಾನುಭವಿಗಳು ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಸೇವಾ ಸಿಂಧುವಿನಲ್ಲಿ ಆನ್‌ಲೈನ್ ಮೂಲಕ ಸೆ.10 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News