ಬೀದರ್ | ಡಿಪ್ಲೋಮಾ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಬೀದರ್ : ಔರಾದ್ (ಬಾ) ನಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಯು ಎಸೆಸೆಲ್ಸಿಯಲ್ಲಿ ಕನಿಷ್ಠ ಶೇ.35 ಅಂಕ ಪಡೆದು ತೇರ್ಗಡೆ ಹೊಂದಿ ಪಾಸಾಗಿರಬೇಕು.
ಲಗತ್ತಿಸಬೇಕಾದ ದಾಖಲೆಗಳು : ಎಸೆಸೆಲ್ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಭಾವಚಿತ್ರದೊಂದಿಗೆ ಪ್ರವೇಶ ಪಡೆಯಬಹುದಾಗಿದೆ.
ವಿದ್ಯಾರ್ಥಿಗಳು ಸಂಸ್ಥೆಗೆ ಹಾಜರಾಗಿ ಸೂಕ್ತ ದಾಖಲಾತಿಗಳನ್ನು ಸಲ್ಲಿಸಿ ಸರ್ಕಾರ ನಿಗದಿಪಡಿಸಿದ ಪ್ರವೇಶ ಶುಲ್ಕ ನೀಡಿ ನೇರವಾಗಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಔರಾದ್(ಬಾ) ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರ (78992 88998) ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.