Bidar | ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್‌ಗಾಗಿ ಅರ್ಜಿ ಆಹ್ವಾನ
ಬೀದರ್ : 2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಮೂರು ವರ್ಷದ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ ಹೆಚ್ ಟಿ ಟಿ) ಕೋರ್ಸ್ ಕಲಿಕೆಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು 2,500 ರೂ. ನಂತೆ ಶಿಷ್ಯವೇತನ ನೀಡಲಾಗುವುದು. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಅರ್ಜಿಯನ್ನು https://swdhmis.karnataka.gov.in/ ಮೂಲಕ ಡೌನ್‍ಲೊಡ್ ಮಾಡಿಕೊಂಡು ಭರ್ತಿ ಮಾಡಿ ಗದಗ-ಬೆಟಗೇರಿಯ ನರಸಾಪುರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪ್ರಾಂಶುಪಾಲರ ವಿಳಾಸಕ್ಕೆ ಮೇ 30ರ ಒಳಗಾಗಿ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08372-259664, ಮೊಬೈಲ್ ಸಂಖ್ಯೆ: 99161 43619 ಅಥವಾ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ರೇಷ್ಮೆ ಇಲಾಖೆ ಕಛೇರಿ ಕಟ್ಟಡ, 2ನೇ ಮಹಡಿ, ಕೋಳಾರ್ (ಕೆ) ಬೀದರ ಇವರ ಮೊಬೈಲ್ ಸಂಖ್ಯೆ: 99722 05911 ಗಳಿಗೆ ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.